ಬಡಗನ್ನೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪುತ್ತೂರು ಗ್ರಾಮ ಪಂಚಾಯತ್ ಬಡಗನ್ನೂರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕರ ಆಯ-ವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ವಿಶೇಷ ಗ್ರಾಮ ಸಭೆಯು ನ.30ರಂದು ಪೂರ್ವಾಹ್ನ ಗಂ 11 ಕ್ಕೆ ಬಡಗನ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಲಿರುವುದು. ಈ ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ (2025-26ನೇ ಸಾಲಿನಲ್ಲಿ) ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಗ್ರಾಮ ಸಭೆಯಲ್ಲಿ ಭಾಗವಹಿಸಿ, ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಪ್ರಸ್ತಾವನೆಗಳನ್ನು ಸಲ್ಲಿಸಬೇಕಾಗಿರುವುದರಿಂದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅರ್ಜಿ ಮತ್ತು ಆರ್.ಟಿ.ಸಿ ಲಗತ್ತಿಸಿ ಗ್ರಾಮ ಸಭೆಯಲ್ಲಿ ನೀಡುವಂತೆ ಅಧ್ಯಕ್ಷೆ ಪುಷ್ಪಲತಾ ದೇವಕಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.