ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ನ ತ್ರೈಮಾಸಿಕ ಕೆಡಿಪಿ ಸಭೆಯು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರ ಅಧ್ಯಕ್ಷತೆಯಲ್ಲಿ ನ.27 ರಂದು ಗ್ರಾಪಂ ಸಭಾಂಗಣದಲ್ಲಿ ನಡೆಯಿತು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರುಗಳಾದ, ಗ್ರಾಪಂ ಉಪಾಧ್ಯಕ್ಷೆ ಸುಮಿತ್ರಾ ಪಲ್ಲತ್ತಡ್ಕ ಮತ್ತು ಸುಭಾಷಿಣಿ ಉಪಸ್ಥಿತರಿದ್ದರು. ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ, ಗ್ರಂಥಾಲಯ, ಪಂಚಾಯತ್ರಾಜ್ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಮಾತನಾಡಿ, ಗ್ರಾಮದ ಅಭಿವೃದ್ದಿಗೆ ಇಲಾಖೆಯ ಅಧಿಕಾರಿಗಳ ಸಹಕಾರವೂ ಬಹಳಷ್ಟು ಅಗತ್ಯವಿದೆ. ಕೆಡಿಪಿ ಸಭೆಗೆ ಬಹಳಷ್ಟು ಅಧಿಕಾರಿಗಳು ಬರಲಿಲ್ಲ ಇದು ತುಂಬಾ ಬೇಸರ ತಂದಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಅಧಿಕಾರಿಗಳು ಗ್ರಾಮ ಪಂಚಾಯತ್ನೊಂದಿಗೆ ಸಹಕಾರ ನೀಡುವ ಮೂಲಕ ಗ್ರಾಮಸ್ಥರಿಗೆ ಇಲಾಖೆಯ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡುವಂತೆ ಕೇಳಿಕೊಂಡರು.
ಸಭೆಯಲ್ಲಿ ಗ್ರಾಪಂ ಸದಸ್ಯರುಗಳು, ಕೆಯ್ಯೂರು ಕೆಪಿಎಸ್ ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್, ಪ್ರಾಥಮಿಕ ವಿಭಾಗದ ಮುಖ್ಯಗುರು ಬಾಬು ಮಾಸ್ತರ್ ಹಾಗೇ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ನಮಿತಾ ಎ.ಕೆ ವರದಿ ಮಂಡನೆ ಮಾಡಿದರು. ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ವಂದಿಸಿದರು.