





ಪುತ್ತೂರು: ಬನ್ನೂರು ಚೆಲುವಮ್ಮನಕಟ್ಟೆ ಸಮೀಪ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ನಿಷೇಧಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಟಪ್ಟ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಆರ್ಯಾಪು ಗ್ರಾಮದ ಶೈಲೇಶ್(28ವ) ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಕೆ.ಎಸ್ ಮತ್ತು ಸಿಬ್ಬಂದಿಗಳೊಂದಿಗೆ ಕರ್ತವ್ಯದಲ್ಲಿ ತೆರಳುತ್ತಿದ್ದ ವೇಳೆ ಬನ್ನೂರು ಚೆಲುವಮ್ಮನ ಕಟ್ಟೆಯ ಬಳಿ ಅನುಮಾನಾಸ್ಪದವಾಗಿ ಇದ್ದಾತನನ್ನು ವಿಚಾರಿಸಿದರು. ಆತನ ವರ್ತನೆ ನೋಡಿ ಆತ ಯಾವುದೋ ಮಾದಕ ವಸ್ತು ಸೇವನೆ ಮಾಡಿರಬಹುದೆಂದು ವೈದ್ಯಕೀಯ ಪರೀಕ್ಷೆಗೊಳಪಡಿಸಿದರು. ಈ ವೇಳೆ ಆತನ ನಿಷೇಧಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.














