





ಕಾಣಿಯೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಮರಳುಗಾರಿಕೆ ನಡೆಯುತ್ತಿದ್ದ ಬೋಟ್ ನ್ನು ಗ್ರಾಮಸ್ಥರು ಕಟ್ಟಿ ಹಾಕಿದ ಘಟನೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ನ. 20ರಂದು ನಡೆದಿದೆ. ಚಾರ್ವಾಕ ಸಮೀಪ ಕುಮಾರಧಾರ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂದು ತೀವ್ರ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಸ್ಥಳೀಯ ಕಾಣಿಯೂರು ಗ್ರಾಮ ಪಂಚಾಯತ್ ಗೂ ಮನವಿ ಸಲ್ಲಿಸಿ ಮರಳುಗಾರಿಕೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದರು.




            






