ಉಪ್ಪಿನಂಗಡಿ: ಬೊಳುವಾರು- ಗುರುವಾಯನಕೆರೆ ರಾಜ್ಯ ಹೆದ್ದಾರಿಯ 34ನೇ ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯಲ್ಲಿ ಹೆದ್ದಾರಿ ಕಾಮಗಾರಿಯ ವಿಳಂಬವನ್ನು ಖಂಡಿಸಿ 34 ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಡಿ.2ರಂದು ಬೆಳಗ್ಗೆ 10 ಗಂಟೆಗೆ ಆದರ್ಶನಗರದ ಬಳಿ ಪ್ರತಿಭಟನೆ ನಡೆಯಲಿದೆ.
34 ಗ್ರಾ.ಪಂ. ವ್ಯಾಪ್ತಿಯಲ್ಲಿ ಪುತ್ತೂರಿಗೆ ತೆರಳುವ ರಾಜ್ಯ ಹೆದ್ದಾರಿಯ ವಿಸ್ತರಣಾ ಕಾಮಗಾರಿ ಆರಂಭಿಸಿ ವರ್ಷವೇ ಕಳೆದಿದ್ದು, ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಕಳೆದ ಮಳೆಗಾಲದಲ್ಲಿ ಮಾಡಿದ ಕಾಮಗಾರಿಯೂ ಎದ್ದು ಹೋಗಿದ್ದು, ಹೆದ್ದಾರಿಯಿಡೀ ಹೊಂಡ-ಗುಂಡಿಗಳಿಂದ ಕೂಡಿ ಸಂಚಾರ ಕಷ್ಟ ಸಾಧ್ಯವಾಗಿದೆ. ಮಳೆಗಾಲ ಮುಗಿದರೂ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆದಾರರು ಆರಂಭಿಸಿಲ್ಲ. ಆದ್ದರಿಂದ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಬಿಜೆಪಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು 34 ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಕಟಣೆ ತಿಳಿಸಿದೆ.