ನ.30: ಕಡಬ ತಾಲೂಕು ಪಂಚಾಯತ್‌ ನಲ್ಲಿ ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನಾ ಸಮಾರಂಭ

0

ಕಡಬ: ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕಡಬ ತಾಲೂಕಿನ ಅನುಷ್ಠಾನ ಸಮಿತಿಯ ಕಛೇರಿ ಉದ್ಘಾಟನಾ ಸಮಾರಂಭ ನ.30ರ ಬೆಳಗ್ಗೆ 11 ಗಂಟೆಗೆ ಕಡಬ ತಾಲೂಕು ಪಂಚಾಯತ್‌ ನಲ್ಲಿ ನಡೆಯಲಿದೆ.

ಸಭಾಧ್ಯಕ್ಷತೆಯನ್ನು ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಸುಧೀರ್‌ ಕುಮಾರ್‌ ಶೆಟ್ಟಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್‌ ಗುಂಡೂರಾವ್‌, ದ.ಕ. ಲೋಕಸಭಾ ಸದಸ್ಯರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ, ರಾಜ್ಯ ಸಭಾ ಸಂಸದರಾದ ಡಿ.ವೀರೇಂದ್ರ ಹೆಗ್ಗಡೆ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್‌ ಕುಮಾರ್‌ ರೈ, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿʼಸೋಜ, ಎಸ್‌.ಎಲ್‌.ಭೋಜೇಗೌಡ, ಪ್ರತಾಪಸಿಂಹ ನಾಯಕ್‌ ಕೆ.,ಧನಂಜಯ ಸರ್ಜಿ, ಗೇರು ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ದ.ಕ.ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಭರತ್‌ ಮುಂಡೋಡಿ, ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ಕರ್ನಾಟಕ ವಿಧಾನಪರಿಷತ್‌ ಶಾಸಕರಾದ ಹರೀಶ್‌ ಕುಮಾರ್‌, ಕಡಬ ತಾಲೂಕು ಪಂಚಾಯತ್‌ ಆಡಳಿತಾಧಿಕಾರಿ ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಹೊನ್ನಪ್ಪ ಜಿ. ಗೌಡ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಕೇಂದ್ರ ತೆರೆಯಲಿದ್ದು, ವಂಚಿತ ಫಲಾನುಭವಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ನೊಂದಾಯಿಸಲು ಅವಕಾಶಗಳಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here