ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಸುರುಳಿಮೂಲೆ ಸರಕಾರಿ ಶಾಲೆಯ ಎದುರುಗಡೆ ಇರುವ ಸರ್ವೆ ನಂಬರ್ 296ರಲ್ಲಿ ಇರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ಸಂಪ್ಯ ಪೊಲೀಸ್ ಠಾಣೆಯ ಎಸ್ಸೈ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು, ಕಂದಾಯ ನಿರೀಕ್ಷಕರು, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಘಟನೆ ನ.28ರಂದು ನಡೆದಿದೆ. ಸರಕಾರಿ ಜಾಗವನ್ನು ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಅಲ್ಲಿದ್ದ ಗ್ರಾಮಸ್ಥರು ಒತ್ತಾಯಿಸಿದರು.
ಸರಕಾರಿ ಜಾಗವನ್ನು ಬೇರೆ ಬೇರೆ ವ್ಯಕ್ತಿಗಳು ಒತ್ತುವರಿ ಮಾಡುತ್ತಿದ್ದ ವಿಚಾರದಲ್ಲಿ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಎಷ್ಟು ದೂರು ನೀಡಿದ್ದರು. ಅವರು ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಜಾಗವನ್ನು ಸರ್ವೆ ಮಾಡಬೇಕು, ಸರಕಾರಿ ಜಾಗವನ್ನು ಕಬಳಿಸಲು ಯಾರಿಗೂ ಅವಕಾಶವಿಲ್ಲ ಎಂದು ಆಗ್ರಹಿಸಿದರು. ಜಾಗದ ಸರ್ವೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರು, ರೈತ ಸಂಘದ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.