ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು, ಗ್ರಾಮ ಪಂಚಾಯತ್ ಕಾರ್ಯಾಲಯ ಪುಣಚ ಇದರ 2024-25ನೇ ಸಾಲಿನ ಪ್ರಥಮ ಸುತ್ತಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಹಾಗೂ ಕೇಂದ್ರ ಸರಕಾರದ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ನ. 27 ರಂದು ಬೆಳಿಗ್ಗೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ ಅಧ್ಯಕ್ಷೆ ಯಶೋಧ ಯಾನೆ ಬೇಬಿಯವರು ಸಭಾಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಶಿಶು ಅಭಿವೃದ್ದಿ ಇಲಾಖಾ ಅಧಿಕಾರಿ ಶಾರದಾರವರು ನೋಡೆಲ್ ಅಧಿಕಾರಿಯಾಗಿ ಸಭೆ ನಡೆಸಿಕೊಟ್ಟರು. ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕಿ ಅಂಜಲಿ ಶೇಟ್‌ರವರು ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಾಬ್ ಕಾರ್ಡ್ ಮಾಡಿಸಿಕೊಳ್ಳುವ ಮೂಲಕ ತಮ್ಮ ಜಮೀನಿನಲ್ಲಿ ವೈಯುಕ್ತಿಕ ಕಾಮಗಾರಿಗಳನ್ನು ಮಾಡುವಂತೆ ಕೇಳಿಕೊಂಡರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಪಾರ್ವತಿ ಕೆ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು. ಇದೇ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಸಂವಿಧಾನ ಪೀಠಿಕೆಯನ್ನು ಓದಿ ಪ್ರಮಾಣ ವಚನ ಸ್ವೀಕರಿಸಲಾಯಿತು.