ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ “ಮೇಧಾ – 2025” – ಉಚಿತ ಶಿಕ್ಷಣ ಯೋಜನೆ-ಡಿ.1 ರಂದು ಉಚಿತ ಶಿಕ್ಷಣಕ್ಕಾಗಿ ಪ್ರವೇಶ ಪರೀಕ್ಷೆ

0

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ 5 ವಿವಿಧ ಪರೀಕ್ಷಾ ಕೇಂದ್ರದಲ್ಲಿ ಏಕಕಾಲದಲ್ಲಿ ಪರೀಕ್ಷೆ


puttur: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆಯುವ “ಮೇಧಾ – 2025” – ಉಚಿತ ಶಿಕ್ಷಣ ಯೋಜನೆಯ ಪ್ರವೇಶ ಪರೀಕ್ಷೆ 2024 ರ ಡಿಸೆಂಬರ್ 1 ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ 5 ವಿವಿಧ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ನಡೆಯಲಿದೆ.

ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು, ತೆಂಕಿಲದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಕಡಬದ ಆಲಂಕಾರಿನಲ್ಲಿರುವ ಶ್ರೀ ಭಾರತಿ ಪ್ರೌಢಶಾಲೆ, ಸುಳ್ಯದ ಜಾಲ್ಸೂರಿನಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿರುವ ಶ್ರೀ ಭಾರತಿ ವಿದ್ಯಾಪೀಠ ಪರೀಕ್ಷಾ ಕೇಂದ್ರಗಳಾಗಿರಲಿವೆ.

ಪರೀಕ್ಷೆಗೆ ಈಗಾಗಲೇ ನೋಂದಾಯಿಸಿದ ವಿದ್ಯಾರ್ಥಿಗಳು ತಾವು ನೋಂದಾಯಿಸಿದ ಕೇಂದ್ರದಲ್ಲಿ ಬೆಳಗ್ಗೆ 9.30 ಕ್ಕೆ ಸರಿಯಾಗಿ ಹಾಜರಿರುವುದು. ವಿದ್ಯಾರ್ಥಿಗಳು ಮಾಹಿತಿಗಾಗಿ ಕಾಲೇಜಿನ ಜಾಲತಾಣ www.vivekanandapuc.com ಇದನ್ನು ಸಂದರ್ಶಿಸಬಹುದು. ಹೆಚ್ಚಿನ ಮಾಹಿತಿಗಾಗಿ 9480936010, 8971924424, 8073700468, 81050 72386 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here