ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸದೃಶ ಸಂಭ್ರಮ2024

0

‘ಅನುಭವ ಜನ್ಯ ಕಲಿಕೆಗೆ ಹೆಚ್ಚು ಮಹತ್ವ ಕೊಡಬೇಕು ‘- ಅಶೋಕ್ ಕುಮಾರ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕಛೇರಿ,ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇದರ ಸಹಭಾಗಿತ್ವದಲ್ಲಿ ನಡೆದಂತಹ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಶೋಕ್ ಕುಮಾರ್ ರೈ ಮಕ್ಕಳಲ್ಲಿ ಮುಕ್ತ ಹಾಗೂ ಸೃಜನಶೀಲ ಕಲಿಕೆ ಆದಾಗ ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗುವುದರ ಜೊತೆಗೆ ವ್ಯಕ್ತಿತ್ವದ ಅನಾವರಣವಾಗುತ್ತದೆ. ಇದಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯನ್ನು ಕಲ್ಪಿಸುತ್ತದೆ ಎಂದು ತಿಳಿಸಿ ಶುಭ ಹಾರೈಸಿದರು.

ಪುತ್ತೂರು ನಗರ ಸಭೆಯ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಧ್ವಜಾರೋಹಣಗೈದರು.ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ಚಂದ್ರ ದೀಪ ಬೆಳಗಿಸಿ ಶುಭಾರಂಭಗೊಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಶಾಲಾ ಆವರಣದಲ್ಲಿ ಸಸಿ ನೆಟ್ಟು ಹಸಿರೇ ಉಸಿರು ಆಧಾರಿತ ಪರಿಕಲ್ಪನೆಯಲ್ಲಿ ನಡೆದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘ ಪುತ್ತೂರು ಇದರ ಕಾರ್ಯದರ್ಶಿ ಅಬ್ರಹಾಂ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘ ಪುತ್ತೂರು ಅಧ್ಯಕ್ಷ ನಾಗೇಶ್ ಪಾಟಾಳಿ,ಪ್ರಾಥಮಿಕ ಶಾಲಾ ಸಹ ಶಿಕ್ಷಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸರಕಾರ ನೌಕರರ ಸಂಘ ಕಡಬ ಇದರ ಅಧ್ಯಕ್ಷ ವಿಮಲ್ ನೆಲ್ಯಾಡಿ,ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಾಮಚ್ಚನ್,ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್2 ಇದರ ಜಿಲ್ಲಾ ಕಾರ್ಯಾಧ್ಯಕ್ಷ ಸೀತಾರಾಮ ಗೌಡ,ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಪುತ್ತೂರು ಇದರ ಅಧ್ಯಕ್ಷ ಸುಧಾಕರ್ ರೈ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಡಬ ಇದರ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಸರಕಾರಿ ನೌಕರರ ಸಂಘದ ನಿರ್ದೇಶಕ ತನುಜಾ, ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕಿ ಅಮೃತ ಕಲಾ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ವಸಂತ ಸುವರ್ಣ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಸತೀಶ್ ರೈ ಉಪಸ್ಥಿತರಿದ್ದರು.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಜ್ಞಾ ನಿಡ್ವಣ್ಣಾಯ ಪ್ರಾರ್ಥಿಸಿದರು.ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಇದರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ಮುಖ್ಯ ಗುರು ಆಶಾ ಬೆಳ್ಳಾರೆ ಅತಿಥಿ ಗಣ್ಯರನ್ನು ಸ್ವಾಗತಿಸಿದರು.ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಗೀತಾ. ಬಿ ಕಾರ್ಯಕ್ರಮ ನಿರೂಪಣೆಗೈದರು.ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶಶಿಕಲಾ.ಎಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here