‘ಅನುಭವ ಜನ್ಯ ಕಲಿಕೆಗೆ ಹೆಚ್ಚು ಮಹತ್ವ ಕೊಡಬೇಕು ‘- ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ.
ಮಾನ್ಯ ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕಛೇರಿ,ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇದರ ಸಹಭಾಗಿತ್ವದಲ್ಲಿ ನಡೆದಂತಹ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟನೆಗೈದು ಅಧ್ಯಕ್ಷೀಯ ಸ್ಥಾನದಲ್ಲಿ ಮಾತನಾಡಿದ ಶ್ರೀ ಅಶೋಕ್ ಕುಮಾರ್ ರೈ ಮಕ್ಕಳಲ್ಲಿ ಮುಕ್ತ ಹಾಗೂ ಸೃಜನಶೀಲ ಕಲಿಕೆ ಆದಾಗ ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗುವುದರ ಜೊತೆಗೆ ವ್ಯಕ್ತಿತ್ವದ ಅನಾವರಣವಾಗುತ್ತದೆ. ಇದಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯನ್ನು ಕಲ್ಪಿಸುತ್ತದೆ ಎಂದು ತಿಳಿಸಿ ಶುಭ ಹಾರೈಸಿದರು.
ಪುತ್ತೂರು ನಗರ ಸಭೆಯ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ ಧ್ವಜಾರೋಹಣಗೈದ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ ದೀಪ ಬೆಳಗಿಸಿ ಶುಭಾರಂಭಗೊಳಿಸಿ ಮಕ್ಕಳ ಪ್ರತಿಭೆಯನ್ನು ಹುರಿದುಂಬಿಸಲು ನಮಗೆ ಆಸ್ಪದ ಸಿಕ್ಕಿರುವುದು ಸಂತೋಷದ ವಿಷಯ ಎಂದು ಹೇಳುತ್ತಾ ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್.ಆರ್. ಶಾಲಾ ಆವರಣದಲ್ಲಿ ಸಸಿ ನೆಟ್ಟು ಹಸಿರೇ ಉಸಿರು ಆಧಾರಿತ ಪರಿಕಲ್ಪನೆಯಲ್ಲಿ ನಡೆದ ಪ್ರತಿಭಾ ಕಾರಂಜಿಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶ್ರೀಯುತ ಚಕ್ರಪಾಣಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘ ಪುತ್ತೂರು ಇದರ ಕಾರ್ಯದರ್ಶಿಗಳಾದ ಶ್ರೀ ಅಬ್ರಹಾಂ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಶ್ರೀ ನಾಗೇಶ್ ಪಾಟಾಳಿ,ಪ್ರಾಥಮಿಕ ಶಾಲಾ ಸಹ ಶಿಕ್ಷಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸರಕಾರ ನೌಕರರ ಸಂಘ ಕಡಬ ಇದರ ಅಧ್ಯಕ್ಷರಾದ ಶ್ರೀ ವಿಮಲ್ ನೆಲ್ಯಾಡಿ,ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಶ್ರೀ ಮಾಮಚ್ಚನ್,ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್2 ಇದರ ಜಿಲ್ಲಾ ಕಾರ್ಯಾಧ್ಯಕ್ಷರಾದ ಶ್ರೀ ಸೀತಾರಾಮ ಗೌಡ,ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಪುತ್ತೂರು ಇದರ ಅಧ್ಯಕ್ಷರಾದ ಶ್ರೀ ಸುಧಾಕರ್ ರೈ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಡಬ ಇದರ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಮಲ್ಲಾರ, ಸರಕಾರಿ ನೌಕರರ ಸಂಘದ ನಿರ್ದೇಶಕರಾದ ಶ್ರೀಮತಿ ತನುಜಾ, ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕರಾದ ಶ್ರೀಮತಿ ಅಮೃತ ಕಲಾ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ವಸಂತ ಸುವರ್ಣ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಶ್ರೀ ಸತೀಶ್ ರೈ ಉಪಸ್ಥಿತರಿದ್ದರು.
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಜ್ಞಾನಿಡ್ವಣ್ಣಾಯ ಇವರು ಪ್ರಾರ್ಥಿಸಿದರು.ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಇದರ ಸಮನ್ವಯಾಧಿಕಾರಿಯದ ಶ್ರೀ ನವೀನ್ ಸ್ಟೀಫನ್ ವೇಗಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಅತಿಥಿ ಗಣ್ಯರನ್ನು ಸ್ವಾಗತಿಸಿದರು.ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಗೀತಾ. ಬಿ ಕಾರ್ಯಕ್ರಮ ನಿರೂಪಣೆಗೈದರು.ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಶಶಿಕಲಾ.ಎಸ್ ಉಪಸ್ಥಿತರಿದ್ದರು