ಆಲಂಕಾರು: ಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘದ 2025ರ ಕ್ಯಾಲೆಂಡರನ್ನು ನ.23ರಂದು ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಸಂಘದ ಆಡಳಿತ ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.
ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೈಯ್ಯಲ್ಗರವರು ಸಂಘವು ನೀಡುವ ವಿವಿಧ ಸಾಲಗಳು ಹಾಗೂ ಠೇವಣಿಗಳ ಮಾಹಿತಿಯನ್ನು ಒಳಗೊಂಡಿರುವ ಈ ಕ್ಯಾಲೆಂಡರನ್ನು ಸಂಘದ ಕಾರ್ಯಕ್ಷೇತ್ರದ 16 ಗ್ರಾಮದ ಗ್ರಾಹಕರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಉಚಿತವಾಗಿ ನೀಡುವುದಾಗಿ ತಿಳಿಸಿದರು. ಸಂಘದ ಉಪಾಧ್ಯಕ್ಷ ಜನಾರ್ದನ ಪೂಜಾರಿ ಕದ್ರ, ನಿರ್ದೇಶಕರಾದ ಜಯಕರ ಪೂಜಾರಿ ಕಲ್ಲೇರಿ, ಸಂತೋಷ್ ಕುಮಾರ್ ಮತ್ರಾಡಿ, ಗಂಗಾರತ್ನ ವಸಂತ ಎ, ಜಯಂತ ಪೂಜಾರಿ ನೆಕ್ಕಿಲಾಡಿ, ಆನಂದ ಪೂಜಾರಿ ಮಠದಬೈಲು, ಲಕ್ಷ್ಮೀಶ ಬಂಗೇರ ಪೆಲತ್ತೋಡಿ, ವಿಜಯ ಅಂಬಾ, ವಾಸಪ್ಪ ಪೂಜಾರಿ ಕೇಪುಳು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಲಿಂಗಪ್ಪ ಪೂಜಾರಿ ನೈಯ್ಯಲ್ಗ, sಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಎ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.