ಕಡಬ ತಾಲೂಕು 4ನೆಯ ಸಾಹಿತ್ಯ ಸಮ್ಮೇಳನ : ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ

0

ಕಡಬ: ಕಡಬ ತಾಲೂಕು 4 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನ. 30ರಂದು ಬೆಳಿಗ್ಗೆ ಕಡಬ ತಾಲೂಕು ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಆರಂಭಗೊಂಡಿತು.

ಸಮ್ಮೇಳನದ ಉದ್ಘಾಟನೆಗೆ ಮೊದಲು ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ ನಡೆಯಿತು.
ಪದವು ಸೈಂಟ್ ಜಾರ್ಜ್ ಆರ್ಥೋಡಾಕ್ಸ್ ಚಚ್೯ನ ಮುಂಭಾಗದಿಂದ ಸಮ್ಮೇಳನದ ವೇದಿಕೆ ತನಕ ಮೆರವಣಿಗೆ ನಡೆಯಿತು. ಯಕ್ಷ ಪಾಂಡವ ಮಹಾದ್ವಾರದ ಮೂಲಕ ಮೆರವಣಿಗೆ ಸಮ್ಮೇಳನದ ವೇದಿಕೆಗೆ ಆಗಮಿಸಿತು. ಪೆರಾಬೆ ಗ್ರಾಮ ಪಂಚಾಯಿತಿ ಸದಸ್ಯ ಪಿ.ಜಿ.ರಾಜು ಮೆರವಣಿಗೆ ಉದ್ಘಾಟಿಸಿದರು. ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಸಮ್ಮೇಳನಾಧ್ಯಕ್ಷ ಎನ್.ಕರುಣಾಕರ ಗೋಗಟೆ ಹೊಸಮಠ, ಕನ್ನಡ ಸಾಹಿತ್ಯ ಪರಿಷತ್ ದ ಕ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ಅವರನ್ನು ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಕರೆತರಲಾಯಿತು. ಕಲಶ ಹೊತ್ತ ಮಹಿಳೆಯರು, ಚೆಂಡೆ ಸದ್ದು, ಗೊಂಬೆ ಕುಣಿತ ಮೆರವಣಿಗೆಗೆ ಮೆರುಗು ನೀಡಿತು. ಸಮ್ಮೇಳನದ ಆತಿಥ್ಯ ವಹಿಸಿಕೊಂಡ ಕುಂತೂರುಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳ ಜೊತೆಗೆ ಕುಂತೂರು ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಕುಂಜ ಆಂಗ್ಲ ಮಾಧ್ಯಮ ಶಾಲೆ, ಕಡಬ ಸೈಂಟ್ ಆನ್ಸ್, ಆಲಂಕಾರು ದುರ್ಗಾಂಬಾ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪದಾಧಿಕಾರಿಗಳು, ಸ್ವಾಗತ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.



ಓಂತ್ರಡ್ಕ ಶಾಲಾ ಶಿಕ್ಷಕ ದಿಲೀಪ್ ಎಸ್ ಸ್ವಾಗತಿಸಿ, ಸ್ವಾಗತ ಸಮಿತಿ ಕಾರ್ಯದರ್ಶಿ ಬಿ.ಪದ್ಮನಾಭ ಗೌಡ ಎರ್ಮಳ ವಂದಿಸಿದರು. ಶಿಕ್ಷಕ ಮಹೇಶ್ ಪಾಟಾಳಿ ನಿರೂಪಿಸಿದರು. ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಕುಮಾರ್ ಡಿ.ಜೆ. ಮೆರವಣಿಗೆ ಸಂಯೋಜಿಸಿದರು.

LEAVE A REPLY

Please enter your comment!
Please enter your name here