ಕಡಬ ತಾಲೂಕು 4ನೇಯ ಕನ್ನಡ ಸಾಹಿತ್ಯ ಸಮ್ಮೇಳನ – ವಿವಿಧ ಪ್ರದರ್ಶನ ಮಳಿಗೆ ಉದ್ಘಾಟನೆ

0

ಕಡಬ: ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿರುವ ವಿವಿಧ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಾಯಿತು.

ಕಲಾ ಪ್ರದರ್ಶನವನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮಾಜಿ ಸಂಚಾಲಕ ರಾಯ್ ಅಬ್ರಹಾಂ, ಪುಸ್ತಕ ಪ್ರದರ್ಶನ ಮಳಿಗೆಯನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮಿತಿ ಸದಸ್ಯ ಮಹಮ್ಮದ್ ಕುಂಞಿ, ಪ್ರಾಚ್ಯವಸ್ತು ಪ್ರದರ್ಶನ ಮಳಿಗೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಗುರುರಾಜ್ ರೈ ಉದ್ಘಾಟಿಸಿದರು.


ಸಮ್ಮೇಳನಾಧ್ಯಕ್ಷ ಎನ್ ಕರುಣಾಕರ ಗೋಗಟೆ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಎಂ.ಪಿ. ಶ್ರೀನಾಥ್, ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ಹಾಗೂ ಪದಾಧಿಕಾರಿಗಳು, ಸದಸ್ಯರು, ಸ್ವಾಗತ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here