ಕಡಬ: ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಕಡಬ ತಾಲೂಕು ನೇಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಮ್ಮೇಳನದ ಉದ್ಘಾಟನೆ ಬಳಿಕ ಶಿಕ್ಷಕಿ ಗಾಯತ್ರಿಯವರ ಸಂಯೋಜನೆಯಲ್ಲಿ ಕುಂತೂರು ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೃತಿ ಬಿಡುಗಡೆ ವಿಚಾರಗೋಷ್ಠಿ ಬಳಿಕ ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
