ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕರ ಆಯ-ವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ವಿಶೇಷ ಗ್ರಾಮ ಸಭೆ ದ. 02 ರಂದು ಬೆಳಿಗ್ಗೆ ಕೆದಂಬಾಡಿ ಪಂಚಾಯತ್ ಸಭಾಂಗಣ ನಡೆಯಲಿದೆ.
ಮುಂದಿನ ಆರ್ಥಿಕ ವರ್ಷದಲ್ಲಿ (2025-26ನೇ ಸಾಲಿನಲ್ಲಿ) ಉದ್ಯೋಗ ಖಾತರಿ ಯೋಜನೆಯಲ್ಲಿ ಕಾಮಗಾರಿಯನ್ನು ಮಾಡಲು ಗ್ರಾಮ ಸಭೆಯಲ್ಲಿ ಭಾಗವಹಿಸಿ, ಕ್ರಿಯಾಯೋಜನೆಯಲ್ಲಿ ನಿಮ್ಮ ಕಾಮಗಾರಿಯನ್ನು ಸೇರಿಸಿಕೊಂಡು ಸರಕಾರದಿಂದ ದೊರೆಯುವ ಆರ್ಥಿಕ ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಖಾತರಿ ಬಗ್ಗೆ ಮಾಹಿತಿಗೆ ಗ್ರಾಮ ಪಂಚಾಯತನ್ನು ಸಂಪರ್ಕಿಸಬಹುದಾಗಿದೆ. ಮುಂದಿನ ವರ್ಷ ಕೈಗೊಳ್ಳುವ ಎಲ್ಲಾ ಕಾಮಗಾರಿಗಳನ್ನು ಈ ಗ್ರಾಮ ಸಭೆಯ ಕ್ರಿಯಾಯೋಜನೆಯಲ್ಲಿ ಸೇರಿಸಿಕೊಳ್ಳತಕ್ಕದ್ದಾಗಿದ್ದು ಮುಂದಿನ ದಿನಗಳಲ್ಲಿ ಬಂದ ಅರ್ಜಿಗಳನ್ನು ಸ್ವೀಕರಿಸಲು ಅವಕಾಶಗಳಿರುವುದಿಲ್ಲ ಆದ್ದರಿಂದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ಸುಜಾತ ಎನ್, ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್ ಬೀಡು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಗ್ರೇಡ್ 1 ಕಾರ್ಯದರ್ಶಿ ಸುನಂದ ಬಿ ರೈ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.