ಪುತ್ತೂರು ವಿಧಾನ ಸಭಾ ಕ್ಷೇತ್ರದ 3 ಗ್ರಾ.ಪಂಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು- ಗೃಹ ಸಚಿವರಿಂದ ಅಭಿನಂದನೆ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಮೂರು ಗ್ರಾ.ಪಂಗಳಿಗೆ ನಡೆದ ಉಪ ಚುನಾವಣೆಯಲ್ಲಿ 3 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರವರನ್ನು ಅಭಿನಂದಿಸಿದರು.‌


ಧರ್ಮಸ್ಥಳದಲ್ಲಿ ನ.29ರಂದು ನಡೆದ ಲಕ್ಷದೀಪೋತ್ಸವದ ಸರ್ವಧರ್ಮ ಸಮ್ಮೇಳನಕ್ಕೆ ಆಗಮಿಸಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ನೇತೃತ್ವದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಗೃಹ ಸಚಿವರು ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಡಾ.ರಘು, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here