ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಾಜೆ ಗ್ರಾಮದ ಕೊಡಂಗೆ ಎಂಬಲ್ಲಿನ ನಿವಾಸಿ ಕೆ. ಚಂದ್ರಶೇಖರ್ (44.ವ) ಎಂಬವರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಸಂಭವಿಸಿದೆ.
ಕೊಣಾಜೆ ಗ್ರಾಮದ ಆನೆಕಲ್ಲು ಎಂಬಲ್ಲಿನ ಸರಕಾರಿ ರಕ್ಷಿತಾರಣ್ಯದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ಹೇಮಾವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.