ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆಸಲ್ಪಟ್ಟ ಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ ಎಂದು ಪೂರ್ವ ವಲಯಾಧಿಕಾರಿ ಝೋನ್ 15, ಜೆಸಿ ಪ್ರದೀಪ್ ಕುಮಾರ್ ರೈ ಪನ್ನೇ ಅವರು ಹೇಳಿದರು. ಅವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನ.30ರಂದು ನಡೆದ ಹೊನಲು ಬೆಳಕಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ಬಂಡಾಜೆ ಇವರು ಮಾತನಾಡಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅಗತ್ಯ ಎಂದರು. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ಮಾತನಾಡಿ ಹಿರಿಯ ವಿದ್ಯಾರ್ಥಿಗಳು ನಮ್ಮ ಬಲ. ಉನ್ನತ ಹುದ್ದೆಗೇರಿ, ಉತ್ತಮ ವ್ಯಕ್ತಿಗಳಾಗಿ ಬೆಳಗಿ ಬಾಳಬೇಕು. ಅವರ ಸಾಧನೆಗಳು ನಮಗೆ ಸಂತೋಷ ತರುವಂತದ್ದು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾದ ಗಿರಿಶಂಕರ ಸುಲಾಯ ಮಾತನಾಡಿ ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಆಸ್ತಿ, ಹಿರಿಯ ವಿದ್ಯಾರ್ಥಿಗಳು ನಿರಂತರವಾಗಿ ಸಂಸ್ಥೆಯ ಜೊತೆ ನಿಕಟ ಸಂಪರ್ಕದಲ್ಲಿದ್ದು ಸಂಸ್ಥೆಯ ಬೆಳವಣಿಗೆಗೆ ಕಾರಣೀಭೂತಾರಾಗಬೇಕು ಎಂದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಉದಯ ರೈ ಮಾದೋಡಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಬಾಲ್ಯದ ದಿನಗಳನ್ನು ಮೆಲುಕು ಹಾಕುತ್ತಾ ಮತ್ತೆ ಈ ಕ್ರೀಡಾಂಗಣದಲ್ಲಿ ಆಡುವ ಅವಕಾಶ ಒದಗಿ ಬಂದಿದೆ ಎಂದರು.
ಪ್ರಗತಿ ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಮಾತನಾಡಿ, ಸಂಸ್ಥೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ಭಾವನಾತ್ಮಕ ಸಂಬಂಧವಿದ್ದು ಅದು ನಿರಂತರವಾಗಿರಲಿ ಎಂದರು.
ವೇದಿಕೆಯಲ್ಲಿ ಶಾಲಾಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ರೈ ಮಾಳ, ಟ್ರಸ್ಟಿಗಳಾದ ವೃಂದಾ ಜೆ ರೈ, ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಸಹ ಆಡಳಿತ ಅಧಿಕಾರಿ ಹೇಮಾ ನಾಗೇಶ್ ರೈ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಉಪಸ್ಥಿತರಿದ್ದರು.
ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ವಂದಿಸಿದರು. ಸಂಸ್ಥೆಯ ಶಿಕ್ಷಕಿ ರಚನಾ ಪ್ರಾರ್ಥಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಲಿಖಿತ್ ರೈ ಸವಣೂರು ಕಾರ್ಯಕ್ರಮ ನಿರ್ವಹಿಸಿದರು. ಪಂದ್ಯಾಟದಲ್ಲಿ 8 ತಂಡಗಳಿದ್ದು ಮಾಲಕರಾಗಿ ನಾಗೇಶ್ ರೈ ಮಾಳ, ವಸಂತ ರೈ ಕಾರ್ಕಳ, ಸುಜಿತ್ ರೈ ಪಟ್ಟೆ, ಹರಿಪ್ರಸಾದ್ ರೈ ಶೇಣಿ, ಗಿರಿಶಂಕರ ಸುಲಾಯ, ಧನಂಜಯ ಕೇನಾಜೆ, ಜೀತಾಕ್ಷ ಬರೆಪ್ಪಾಡಿ, ದೀಕ್ಷಿತ್ ಬಂಡಾಜೆ ಸಹಕರಿಸಿದರು.