ಪುತ್ತೂರು: ಆರ್ಲಪದವು ಶ್ರೀ ಕಿನ್ನಿಮಾಣಿ ಪೂಮಾಣಿ ಪಿಲಿಭೂತ ದೈವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದ ದ.3 ರಂದು ಬೆಳಿಗ್ಗೆ ಶ್ರೀ ದೈವಸ್ಥಾನದಲ್ಲಿ ನಡೆಯಲಿದೆ.
ಪುತ್ತೂರು ಶಾಸಕರು, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈಯವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ಕಡಮಾಜೆಯವರು ಸಭಾಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ನರಿಮೊಗರು ಸಾಂಧಿಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ಪಾಣಾಜೆ ಸುಬೋಧ ಪ್ರೌಢಶಾಲೆಯ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು, ಲೀಲಾವತಿ ಕೆ.ಶೆಟ್ಟಿ ಕೋಟೆ, ಉದ್ಯಮಿ ರೋಶನ್ ರೈ ಬನ್ನೂರು, ಗುತ್ತಿಗೆದಾರರಾದ ರಂಜಿತ್ ಬಂಗೇರ, ಚಿಕ್ಕಮಗಳೂರು ಶಾ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಸೀತಾರಾಮ್ ಭರಣ್ಯ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ಕಡಮಾಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ, ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು, ಅಧ್ಯಕ್ಷ ಲಕ್ಷ್ಮೀನಾರಾಯಣ ರೈ ಕೆದಂಬಾಡಿ, ಪ್ರ.ಕಾರ್ಯದರ್ಶಿ ತಮ್ಮಣ್ಣ ನಾಯ್ಕ ಸುಡುಕುಳಿ, ಕಾರ್ಯದರ್ಶಿ ವಿಶ್ವನಾಥ ರೈ ಕೊಂದಲ್ಕಾನ ಹಾಗೂ ಸಮಿತಿ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.