ಪುತ್ತೂರು: ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜ.7ಹಾಗೂ 8 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯು ಡಿ.1ರಂದು ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.
ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡಗಡೆಗೊಳಿಸಲಾಯಿತು. ಉತ್ಸವ ಸಮಿತಿ ಅಧ್ಯಕ್ಷ ಹಾರಕರೆ ವೆಂಕಟ್ರಮಣ ಭಟ್, ಅರ್ಚಕ ಶ್ರೀಕಾಂತ್ ಭಟ್ ಹಾಗೂ ಉತ್ಸವ ಸಮಿತಿ ಸದಸ್ಯರು, ಬೈಲುವಾರು ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.