ಬೆಳ್ಳಿಹಬ್ಬ ಸಮಿತಿಯ ಗೌರವಾಧ್ಯಕ್ಷರಾಗಿ ಚಿದಾನಂದ ಬೈಲಾಡಿ, ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು
ಬೆಟ್ಟಂಪಾಡಿ: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆಯಾದ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯು ಹುಟ್ಟಿ ಬೆಳೆದು 25 ನೇ ವರುಷಕ್ಕೆ ಕಾಲಿಡುತ್ತಿದೆ. 2025 ಜನವರಿಯಿಂದ ದಶಂಬರ್ ರವರೆಗೆ ಬೆಳ್ಳಿಹಬ್ಬ ಸವಿನೆನಪಿನ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, 2025 ನೇ ದಶಂಬರ್ ತಿಂಗಳಲ್ಲಿ ಸಮಾರೋಪ ನಡೆಯಲಿದೆ.
ಬೆಳ್ಳಿಹಬ್ಬ ಸಂಭ್ರಮಾಚರಣೆಯ ಸಲುವಾಗಿ ಬೆಳ್ಳಿಹಬ್ಬ ನೂತನ ಸಮಿತಿಯನ್ನು ಇತ್ತೀಚೆಗೆ ಶಾಲೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ವಿದ್ಯಾಸಂಸ್ಥೆಯ ಸ್ಥಾಪಕ ದಿ. ಬೈಲಾಡಿ ಬಾಬು ಗೌಡರ ಪುತ್ರ, ನೋಟರಿ ನ್ಯಾಯವಾದಿ ಚಿದಾನಂದ ಬೈಲಾಡಿ, ಅಧ್ಯಕ್ಷರಾಗಿ ಸಂಸ್ಥೆಯ ಪೋಷಕರೂ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟುರವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಸಂಚಾಲಕರಾಗಿ ವೇ.ಮೂ. ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ, ಕುಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಮೊಕ್ತೇಸರ ದಾಮೋದರ ಮಣಿಯಾಣಿ ಕುಳ, ಶಾಲಾ ಪೋಷಕರಾದ ಶ್ರೀಮತಿ ವಿದ್ಯಾ ಆನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶಾಲಾ ಮುಖ್ಯಗುರು ರಾಜೇಶ್ ಎನ್, ಜೊತೆ ಕಾರ್ಯದರ್ಶಿಗಳಾಗಿ ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ. ಪ್ರಮೋದ್ ಎಂ. ಜಿ., ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ರೈ ಕೊಮ್ಮಂಡ, ಉಪಾಧ್ಯಕ್ಷರಾಗಿ ಆರ್ಯಾಪು ಪ್ರಾ.ಕೃ.ಪ.ಸಹಕಾರಿ ಸಂಘದ ವ್ಯವಸ್ಥಾಪಕ ಅಜಿತ್ ರೈ ನುಳಿಯಾಲು, ಆರ್ಲಪದವು ಸ್ನೇಹ ಟೆಕ್ಸ್‌ಟೈಲ್ಸ್ ಮ್ಹಾಲಕ ವರದರಾಯ ನಾಯಕ್ ಆರ್ಲಪದವು, ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ನಾಗೇಶ್ ಗೌಡ ಪುಳಿತ್ತಡಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್. ಸಿ. ನಾರಾಯಣ ರೆಂಜ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇದರ ಅಧ್ಯಕ್ಷ ಚನಿಯಪ್ಪ ನಾಯ್ಕ ನಿಡಿಯಡ್ಕ ಹಾಗೂ ಪುರೋಹಿತರಾದ ರಾಧಾಕೃಷ್ಣ ಭಟ್ ಕಕ್ಕೂರು ರವರನ್ನು ಆಯ್ಕೆ ಮಾಡಲಾಯಿತು.
ಸಮಿತಿ ರಚನಾ ಸಭೆಯ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈಯವರು ವಹಿಸಿ ಮಾತನಾಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಗಾಗಿ ನೂತನ ಸಮಿತಿಯ ಮೂಲಕ ಶಾಲೆಯ 25 ರ ಸಂಭ್ರಮವನ್ನು ಆಚರಿಸಲು ಪೋಷಕರು, ವಿದ್ಯಾಭಿಮಾನಿಗಳು ಸಹಕರಿಸುವಂತೆ ಕೇಳಿಕೊಂಡರು.
ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ವಿದ್ಯಾಭಿಮಾನಿಗಳಾದ ತಾವೆಲ್ಲಾ ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸ ಉಳಿಸುವ ಕಾರ್ಯ ಮಾಡುತ್ತೇನೆ. ಬೆಳ್ಳಿಹಬ್ಬ ವ್ಯವಸ್ಥಿತವಾಗಿ ನಡೆಯಲಿ. ಆರ್ಥಿಕತೆಗೆ ತಕ್ಕಂತೆ ಕಾರ್ಯ ಯೋಜನೆ ಮಾಡಿಕೊಳ್ಳಬೇಕಾಗಿದೆ’ ಎಂದರು.
ಸಮಿತಿಯ ಗೌರವಾಧ್ಯಕ್ಷ ನೋಟರಿ ನ್ಯಾಯವಾದಿಗಳಾದ ಚಿದಾನಂದ ಬೈಲಾಡಿಯವರು ಮಾತನಾಡಿ ‘ಗ್ರಾಮೀಣ ಭಾಗದಲ್ಲಿ ಇಂತಹುದೊಂದು ಸಂಸ್ಥೆ ನಿರ್ಮಾಣ ಮಾಡಬಹುದು ಎಂಬುದನ್ನು 25 ವರ್ಷಗಳ ಹಿಂದೆ ತೋರಿಸಿಕೊಟ್ಟವರು ನಮ್ಮ ಪೂಜ್ಯನೀಯರು. ಅವರ ಆದರ್ಶದಂತೆ ಸಂಸ್ಥೆಯೂ ಶಾಶ್ವತವಾದ ಹೆಸರು ಪಡೆಯುವಂತಾಗಲಿ’ ಎಂದು ಆಶಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಡಾ. ಸತೀಶ್ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ರೈ ಕಟ್ಟಾವು ಉಪಸ್ಥಿತರಿದ್ದರು. ಮುಖ್ಯಗುರು ರಾಜೇಶ್ ನೆಲ್ಲಿತ್ತಡ್ಕ ವಂದಿಸಿದರು.