ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
7ನೇ ತರಗತಿಯ ವಿದ್ಯಾರ್ಥಿನಿ ಕು. ಯಶ್ವಿ ಪಿ. ಇವರು ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 6ನೇ ತರಗತಿಯ ವಿದ್ಯಾರ್ಥಿನಿ ಕು. ಪ್ರಾಂಶಿ ಇವರು ಅಭಿನಯ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 5ನೇ ತರಗತಿಯ ವಿದ್ಯಾರ್ಥಿನಿ ಕು. ಶಾನ್ವಿ ಸುಧೀರ್ ಭಕ್ತಿ ಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.