ಪುತ್ತೂರು: ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಬಾಂಧವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ” ಕೋಟಿ ಚೆನ್ನಯ ಕ್ರೀಡಾಕೂಟ-2024″ ಡಿ.8 ರಂದು ನಡೆಯಲಿದ್ದು, ಈ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಡಿ.1 ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಬಾಭವನದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ ಬಿ ಎನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಘಟಕದ ಪದಾಧಿಕಾರಿಗಳು, ನಿರ್ದೇಶಕರುಗಳು, ಮಾಜಿ ಅಧ್ಯಕ್ಷರುಗಳು, ದೈಹಿಕ ಶಿಕ್ಷಣ ಶಿಕ್ಷಕರು, ಸರ್ವ ಸದಸ್ಯರು ಭಾಗವಹಿಸಿದರು. ಈ ಸಭೆಯಲ್ಲಿ ಕ್ರೀಡಾಕೂಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಅಧ್ಯಕ್ಷ ಜಯರಾಂ ಬಿ.ಎನ್ ಸ್ವಾಗತಿಸಿ, ಉಪಾಧ್ಯಕ್ಷ ಅಣ್ಣಿ ಪೂಜಾರಿ ಧನ್ಯವಾದ ಸಲ್ಲಿಸಿದರು.