ಪುತ್ತೂರು ಬಿಜೆಪಿಯಿಂದ 5ಸಾವಿರ ಮಂದಿ ಭಾಗವಹಿಸಲಿದ್ದಾರೆ – ದಯಾನಂದ ಶೆಟ್ಟಿ ಉಜ್ರೆಮಾರು
ಪುತ್ತೂರು: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಆಗಿರುವ ಅನ್ಯಾಯವನ್ನು ಖಂಡಿಸಿ ಬಾಂಗ್ಲಾದೇಶಕ್ಕೆ ಸರಿಯಾದ ದಿಕ್ಕನ್ನೂ ತೋರಿಸುವ ನಿಟ್ಟಿನಲ್ಲಿ ಡಿ.4ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 5ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜ್ರೆಮಾರು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದೇಶವನ್ನು ಯಾವ ರೀತಿ ತೆಗೆದುಕೊಳ್ಳುವ ಕುರಿತು ಚಿಂತನೆ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಬಾಂಗ್ಲಾದೇಶಕ್ಕೆ ಸರಿಯಾದ ಧಿಕ್ಕನ್ನು ತೋರಿಸುವ ಉದ್ದೇಶದಿಂದ ಭಾರತದ ಪ್ರಧಾನಿಯವರಿಗೆ ಬೆಂಬಲ ನೀಡಬೇಕು. ಆ ಭಾಗದ ಹಿಂದೂಗಳನ್ನು ರಕ್ಷಣೆ ಮಾಡಬೇಕು. ಪ್ರತಿಭಟನೆಗೆ ಬಿಜೆಪಿ ಪುತ್ತೂರು ಭಾಗದಿಂದ ಪ್ರತಿ ಬೂತ್ ಮಟ್ಟದಿಂದಲೂ ತಲಾ 20 ಮಂದಿಯಂತೆ ಸುಮಾರು 5ಸಾವಿರ ಮಂದಿ ಮಂಗಳೂರಿನಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಪ್ರತಿಭಟನೆಯನ್ನು ರಾಜಕೀಯವಾಗಿ ತೆಗೆದುಕೊಳ್ಳದೆ ನಮ್ಮೆಲ್ಲರ ಅಳಿವು ಉಳಿವಿನ ಉದ್ದೇಶದಿಂದ ನಡೆಯುವ ಪ್ರತಿಭಟನೆಯಾಗಿದೆ. ಮುಂದಿನ ದಿನ ಈ ದೇಶದ ಪರಿಸ್ಥಿತಿಯೂ ಯಾವ ರೀತಿ ಆಗಬಹುದು ಎಂಬ ಚಿಂತನೆಯನ್ನೂ ಮಾಡಬೇಕು. ಹಾಗಾಗಿ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ವಿಶ್ವನಾಥ ಕುಲಾಲ್ ಉಪಸ್ಥಿತರಿದ್ದರು.