ಶಿಕ್ಷಣ ಸಂಸ್ಥೆ ಆರಂಭಿಸಿದ ಆಂಟನಿ ಪತ್ರಾವೋ ನಮ್ಮ ಸಂಸ್ಥೆಗಳ ಶಿಲ್ಪಿ-ಲಾರೆನ್ಸ್ ಮಸ್ಕರೇನಸ್
ಡಿ.3 ಮಾಯ್ ದೆ ದೇವುಸ್ ಅನುದಾನಿತ ಹಿ.ಪ್ರಾ.ಶಾಲೆ
ಡಿ.5: ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆ
ಡಿ.6: ಸಂತ ವಿಕ್ಟರನ ಆ.ಮಾ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ
ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಮಾಯ್ ದೇ ದೇವುಸ್ ಚರ್ಚ್ ವಠಾರದಲ್ಲಿರುವ ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆ ಹಾಗೂ ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಡಿ.3ರಿಂದ 6ರವರೆಗೆ ನಡೆಯಲಿದ್ದು ಇದರ ಪ್ರಯುಕ್ತ ಡಿ.2ರಂದು ಬೆಳಿಗ್ಗೆ ಚರ್ಚ್‌ನಲ್ಲಿ ದಿವ್ಯ ಬಲಿಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ 9.15ಕ್ಕೆ ದಿವ್ಯ ಬಲಿಪೂಜೆ ನಡೆದು ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಪುತ್ತೂರಿನಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ ಕೀರ್ತಿ ಅವರು ಆಂಟನಿ ಪತ್ರಾವೋರವರಿಗೆ ಸಲ್ಲುತ್ತದೆ. ಅವರು ನಮ್ಮ ಸಂಸ್ಥೆಗಳ ಶಿಲ್ಪಿಗಳು. ಪುತ್ತೂರು ತಾಲೂಕಿನ ಪ್ರಥಮ ಆಂಗ್ಲ ಮಾಧ್ಯಮ ಶಾಲೆ ಎಂಬ ಕೀರ್ತಿ ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಗೆ ಇದೆ. ಈ ಶಾಲೆಗಳು 50 ವರ್ಷ ಪೂರೈಸಿದೆ. ಈ ಶಾಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ ಅದಕ್ಕಾಗಿ ನಾವು ದೇವರನ್ನು ಸ್ತುತಿಸುತ್ತೇವೆ. ಈ ಸಂಸ್ಥೆಯ ಸ್ಥಾಪನೆಗೆ ಕಾರಣಕರ್ತರಾದ ಇಲ್ಲಿ ಕರ್ತವ್ಯ ನಿರ್ವಹಿಸಿದ್ದ ಎಲ್ಲ ಗುರುಗಳನ್ನು ಸ್ಮರಿಸುತ್ತೇವೆ. ಪುತ್ತೂರಿನಲ್ಲಿ ವಿದ್ಯೆ ಪಸರಿಸಲು ಇಲ್ಲಿನ ವಿದ್ಯಾಸಂಸ್ಥೆಗಳು ಕಾರಣವಾಗಿದೆ ಎಂದು ಹೇಳಿ ಹಾರೈಸಿದರು.
ಮುಖ್ಯ ಅತಿಥಿಯಾಗಿ ಸುಳ್ಯ ಸಂತ ಬ್ರಿಜಿದ್ ಚರ್ಚ್‌ನ ಧರ್ಮಗುರು ವಂ.ವಿಕ್ಟರ್ ಡಿಸೋಜ ಹಾಗೂ ಪುತ್ತೂರು ಕ್ಲಸ್ಟರ್‌ನ ಸಿ.ಆರ್.ಪಿ ಶಶಿಕಲ ಎಸ್., ಆಗಮಿಸಿದ್ದರು. ಮಾಯ್ ದೆ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರು ವಂ. ಲೋಹಿತ್ ಅಜಯ್ ಮಸ್ಕರೇನಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೊಸ್ತ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಜಯಂತ್ ಉರ್ಲಾಂಡಿ, ಮೌರೀಷ್ ಕುಟಿನ್ಹಾ, ಅಶ್ರಫ್, ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಾನೆಟ್ ಡಿ.ಸೋಜ, ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಹ್ಯಾರಿ ಡಿ.ಸೋಜ, ಹಾಗೂ ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರೋಸಾಲಿನ್ ಲೋಬೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಧನುಷ್ ಸ್ವಾಗತಿಸಿ, ಗಾಡ್ವಿನ್ ಜೈಸನ್ ಪಿಂಟೊ ವಂದಿಸಿದರು. ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಡಿ.3, ಡಿ.5, ಡಿ.6ರಂದು ಮೂರು ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ:
ಮಾಯ್ ದೇ ದೇವುಸ್ ಚರ್ಚ್ ವಠಾರದಲ್ಲಿರುವ ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.3ರಂದು, ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ಡಿ.5ರಂದು ಹಾಗೂ ಸಂತ ವಿಕ್ಟರನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.6ರಂದು ವಾರ್ಷಿಕೋತ್ಸವ ನಡೆಯಲಿದೆ.
ಡಿ.3ರಂದು ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಬೆಳಿಗ್ಗೆ 9 ರಿಂದ ನಡೆಯಲಿದ್ದು ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಎಸ್‌ವಿಎಸ್ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಎಸ್.ಜಯಶ್ರೀ ಶೆಣೈ ಭಾಗವಹಿಸಲಿದ್ದಾರೆ. ಚರ್ಚ್‌ನ ಸಹಾಯಕ ಧರ್ಮಗುರು ವಂ.ಲೋಹಿತ್ ಅಜಯ್ ಮಸ್ಕರೇನಸ್ ಹಾಗೂ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತ ಗೌರವ ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮ ಬಳಿಕ 10ರಿಂದ ವಿದ್ಯಾರ್ಥಿಗಳಿಂದ ಉಲ್ಲಾಸದ ಝೇಂಕಾರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಡಿ.5ರಂದು ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಬೆಳಿಗ್ಗೆ 9ರಿಂದ ನಡೆಯಲಿದ್ದು ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಎ.ಜೆ.ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸಯನ್ಸ್ ಸೆಂಟರ್‌ನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಶ್ರುತಿ ರೋಷನ್ ಬೆಳ್ಳೂರು ಭಾಗವಹಿಸಲಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಜಾನ್ಸನ್ ಡಿ.ಸೋಜ, ಚರ್ಚ್‌ನ ಸಹಾಯಕ ಧರ್ಮಗುರು ವಂ.ಲೋಹಿತ್ ಅಜಯ್ ಮಸ್ಕರೇನಸ್ ಹಾಗೂ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತ ಗೌರವ ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಡಿ.6ರಂದು ಸಂತ ವಿಕ್ಟರನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಬೆಳಿಗ್ಗೆ 9ರಿಂದ ನಡೆಯಲಿದ್ದು ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ಆಯುರ್ವೇದ ಆಸ್ಪತ್ರೆಯ ಡಾ.ಪ್ರದೀಪ್ ಕುಮಾರ್ ಭಾಗವಹಿಸಲಿದ್ದಾರೆ. ಚರ್ಚ್‌ನ ಸಹಾಯಕ ಧರ್ಮಗುರು ವಂ.ಲೋಹಿತ್ ಅಜಯ್ ಮಸ್ಕರೇನಸ್ ಹಾಗೂ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತ ಗೌರವ ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.