ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಕೂರೇಲು

0

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವದ ಉತ್ಸವ ಸಮಿತಿ ಅಧ್ಯಕ್ಷರಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಸದಾನಂದ ಶೆಟ್ಟಿ ಕೂರೇಲು ಅವರ ಆಯ್ಕೆಯಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ದೇವಸ್ಥಾನದ ಎಲ್ಲಾ ಕಾರ್ಯಗಳಲ್ಲಿ ಸಕ್ರೀಯರಾಗಿದ್ದ ಸದಾನಂದ ಶೆಟ್ಟಿಯವರು ಆಡಳಿತ ಮಂಡಳಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಅಲ್ಲದೆ ಕಳೆದ ಮೂರು ಅವಧಿಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ದೇವಸ್ಥಾನದ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಳೆದ ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರು ಆಗಿದ್ದ ಇವರು ಆರ್ಯಾಪು ಗ್ರಾ.ಪಂ ಮಾಜಿ ಅಧ್ಯಕ್ಷ, ಸದಸ್ಯರಾಗಿರುತ್ತಾರೆ. ಪ್ರಸ್ತುತ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿರುತ್ತಾರೆ.

LEAVE A REPLY

Please enter your comment!
Please enter your name here