ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ದ.ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳು ಒಕ್ಕೂಟ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಹಕಾರದೊಂದಿಗೆ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ಬೀರಮಲೆ ವಿಶೇಷ ಚೇತನರ ಪ್ರಜ್ಞಾಶ್ರಮದಲ್ಲಿ ಆರೋಗ್ಯ ತಪಾಸಣೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಯದುರಾಜ್ ಅವರು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಲಯನ್ ಅಧ್ಯಕ್ಷೆ ಪ್ರೇಮಲತಾ ರಾವ್, ಕಾರ್ಯದರ್ಶಿ ಲಯನ್ ಅರವಿಂದ ಭಗವಾನ್, ಕೋಶಾಧಿಕಾರಿ ಲಯನ್ ಸುಧಾಕರ್ ಅವರು ಉಪಸ್ಥಿತರಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಕಾರ್ಯದರ್ಶಿಯಾದ ಲಯನ್ ನಯನ ರೈ ಸ್ವಾಗತಿಸಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ಮೊಹಮ್ಮದ್ ರಫೀಕ್ ವಂದಿಸಿದರು. ಅಣ್ಣಪ್ಪ ದಂಪತಿಗಳು ಸಹಕರಿಸಿದರು.