ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಕುರಿತು ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ ನ.30ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಉದ್ಯೋಗ ಖಾತರಿ ತಾಂತ್ರಿಕ ಸಂಯೋಜಕಿ ಆಕಾಂಕ್ಷ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ನಾರಾಯಣ ನಾಯಕ್, ವಿಮಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಭಾರ ಪಿಡಿಒ ಆಶಾ ಸ್ವಾಗತಿಸಿ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು.