ವಿಟ್ಲ: ಆಟೋ ಚಾಲಕ ನಾಪತ್ತೆ

0

ವಿಟ್ಲ: ಆಟೋ ಚಾಲಕರೋರ್ವರು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ್ ರವರ ಪುತ್ರ ಧನರಾಜ್‌ (28 ವ) ನಾಪತ್ತೆಯಾದವರಾಗಿದ್ದಾರೆ. ಧನರಾಜ್ ರವರು ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ನ.28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದ ಮನೆಯಿಂದ ಆಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವರು ಆ‌ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಸಂಬಂಧಿಕರ ಮನೆಯ‌ ಸಹಿತ ವಿವಿಧ ಕಡೆ ಹುಟುಕಾಟ ನಡೆಸಿದಾಗ ಅವರು‌ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಆದರೆ ಧನರಾಜ್‌ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಧನರಾಜ್ ರವರ ತಂದೆ ಪದ್ಮನಾಭ ನಾಯ್ಕ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ‌ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಈ ಭಾವಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here