ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಬೆಳ್ಳಿಪ್ಪಾಡಿ ಬೂತ್ 51ರ ಅಧ್ಯಕ್ಷರಾಗಿ ಮನೋಜ್ ಜತ್ತಿಬೆಟ್ಟು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೇಶವ ಗೌಡ ದೇವಸ್ಯ ಮತ್ತು ಬೆಳ್ಳಿಪ್ಪಾಡಿ ಬೂತ್ 52ರ ಅಧ್ಯಕ್ಷರಾಗಿ ಜನಾರ್ದನ ಕೋಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಹೊಸಮನೆ ಆಯ್ಕೆಯಾಗಿದ್ದಾರೆ.
ಬೆಳ್ಳಿಪ್ಪಾಡಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನೆಕ್ಕಿಲಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಜಾಲು, ಕಾರ್ಯದರ್ಶಿ ಮೋಹನ್ ಪಕ್ಕಳ, ಸಂಚಾಲಕ ಪ್ರವೀಣ್ ಕೋಡಿ, ಕೋಡಿಂಬಾಡಿ ಗ್ರಾ.ಪಂ ಸದಸ್ಯರಾದ ರಾಮಣ್ಣ ಗೌಡ ಗುಂಡೋಳೆ, ರಾಮಚಂದ್ರ ಪೂಜಾರಿ ಶಾಂತಿನಗರ, ಮೋಹಿನಿ ಜನಾರ್ದನ, ತಾ.ಪಂ ಮಾಜಿ ಸದಸ್ಯ ಲಕ್ಷ್ಮಣ ಗೌಡ ಕಂಬಳತ್ತಡ್ಡ, ಮನೋಹರ್ ಗೌಡ ಡಿ.ವಿ ಸೇರಿದಂತೆ ಹಲವು ಮಂದಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.