ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಿಂಗಳಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ರಾಯಿದ್ ಅಬ್ದುಲ್ ಖಾದರ್ರವರು ಪ್ರಾಥಮಿಕ ಶಾಲಾ ಹಂತದ ಹಿರಿಯರ ವಿಭಾಗದಲ್ಲಿ ನಡೆದ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯ ಗುರು ವಿಜಯ ಕೆ ತಿಳಿಸಿದ್ದಾರೆ.