ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಹಿರಿಯರ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಆನಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ವಿಶಾಂತ್ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಮಲೆಪಡ್ಪು ಎಂ ವಿನೋದ್ ಕುಮಾರ್ ಹಾಗೂ ವಿದ್ಯಾ ಕೆ ಇವರ ಪುತ್ರರಾಗಿದ್ದಾರೆ.