ಆಲಂಕಾರು: ಗೋಳಿತ್ತಟ್ಟು ಗ್ರಾಮದ ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆ ಪ್ರಭಾರ ಮುಖ್ಯಶಿಕ್ಷಕ, ಆಲಂಕಾರು ಗ್ರಾಮದ ಬಾಕಿಲ ನಿವಾಸಿ ಪ್ರದೀಪ್ ಬಾಕಿಲ(43ವ.) ಡಿ.5ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಡಿ.4ರಂದು ಎಂದಿನಂತೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ಬಂದಿದ್ದರು. ಡಿ.19ರಂದು ಶಾಲಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಪ್ರತಿಭಾವಂತ ಶಿಕ್ಷಕರಾಗಿದ್ದ ಪ್ರದೀಪ್ ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ವಿವಿಧ ಚಟುವಟಿಕೆ ಹಮ್ಮಿಕೊಳ್ಳುವ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಜೆಸಿಐಯಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡುವ ಮೂಲಕ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೂ ಭಾಜನರಾಗಿದ್ದರು.
ಪ್ರದೀಪ್ ಬಾಕಿಲ ಅವರ ಮೃತದೇಹ ಡಿ.5ರಂದು ಬೆಳಿಗ್ಗೆ ಮನೆಯ ಅಂಗಲದಲ್ಲಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಪತ್ನಿ ಪೆರಾಬೆ ಶಾಲಾ ಸಹಶಿಕ್ಷಕಿ ಹೇಮಲತಾ, ಪುತ್ರ ಆಶ್ಲೇಷ, ಪುತ್ರಿ ಅದ್ವಿಕಾ, ತಂದೆ ಮೋನಪ್ಪ ಗೌಡ, ತಾಯಿ ಸಾವಿತ್ರಿ ಹಾಗೂ ಸಹೋದರರನ್ನು ಅಗಲಿದ್ದಾರೆ.