ಡಿ.6-7: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತ)ಕ್ಕೆ ಪೂಜೆ ಸಲ್ಲಿಸುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.6 ಮತ್ತು ಡಿ.7ರಂದು ನಡೆಯಲಿದೆ.

ಡಿ.6ರ ರಾತ್ರಿ 8.30 ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯಲಿದೆ. ಡಿ.7ರಂದು ಬೆಳಿಗ್ಗೆ 9ಕ್ಕೆ ಗಣಪತಿ ಹೋಮ, 11ರ ನಂತರ ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ, ಮಧ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ವಿಶೇಷ ಪೂಜೆ,ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 6 ರಿಂದ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಮೇಳದವರಿಂದ ಸಮಗ್ರ ಭೀಷ್ಮ ಯಕ್ಷಗಾನ ಬಯಲಾಟ ನಡೆಯಲಿದೆ.

ವಿಶೇಷತೆ: ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here