ಪುಣಚ: ಕೋಟಿ ಚೆನ್ನಯ ಬಿಲ್ಲವ ಸಂಘ ಪುಣಚ ಇವರ ಆಶ್ರಯದಲ್ಲಿ ಸಂಘದ ಗುರುಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ ಡಿ.8ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ ಅರ್ಕೆಚ್ಚಾರು ಸುರೇಶ್ ಶಾಂತಿಯವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಟಿ ಚೆನ್ನಯ ಬಿಲ್ಲವ ಸಂಘದ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ಸಭಾಧ್ಯಕ್ಷತೆ ವಹಿಸಲಿದ್ದಾರೆ. ನಾರಾಯಣಗುರು ವಿಚಾರವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ದೈವಪಾತ್ರಿ, ಪತ್ರಕರ್ತ ಸನ್ನಿಧ್ ಪೂಜಾರಿ, ಸಜಿಪ ಮುಡ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಹರೀಶ್ ಸಿ.ಎಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್.ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗೌರವ ಸಮರ್ಪಣೆ: ಸ್ಥಳೀಯರಾದ ಹಿರಿಯ ದೈವಪಾತ್ರಿ ಅಣ್ಣು ಪೂಜಾರಿ ದಲ್ಕಾಜೆಗುತ್ತು, ಹಿರಿಯ ಮೂರ್ತೆದಾರ ಸಾಂತಪ್ಪ ಪೂಜಾರಿ ಹಿತ್ತಿಲು, ಬಹುಮುಖ ಸಾಧನೆಯ ಕಾಂತಪ್ಪ ಬಂಗೇರ ಬಳಂತಿಮೊಗರು ರವರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಪದಗ್ರಹಣ: ಸಂಘದ ಮುಂದಿನ ಎರಡು ವರ್ಷದ ಅವಧಿಯ ಬಿಲ್ಲವ ಸಂಘದ ಸಮಿತಿ, ಮಹಿಳಾ ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಿಲ್ಲವ ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪುಣಚ ಕೋಟಿ ಚೆನ್ನಯ ಬಿಲ್ಲವ ಸಂಘದ ಪ್ರಕಟಣೆ ತಿಳಿಸಿದೆ