ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ.
ಬೆಳಗ್ಗೆ 6.10ಕ್ಕೆ ಸೂರ್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ ವಿಷ್ಣು ಸಹಸ್ರನಾಮ ಪಾರಾಯಣ ಸಹಿತ ಹಾಲು ಪಾಯಸ ಸೇವೆ,ಮಧ್ಯಾಹ್ನ ದೇವರಿಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ 6.14 ಗೋಧೊಳಿ ಲಗ್ನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದ್ದು,ರಾತ್ರಿ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಭಜನಾ ಮಂಡಳಿಯ ಕಾರ್ಯಕಾರಿ ಮಂಡಳಿ ಸದಸ್ಯರು ಹಾಗೂ ಸರ್ವಸದಸ್ಯರು ತಿಳಿಸಿದ್ದಾರೆ.