ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮುಂಬರುವ ಉತ್ಸಾವದಿಗಳ ಸಿದ್ಧತೆಗಾಗಿ ವರ್ಷಾವಧಿ ಹಾಕುವ ಚಪ್ಪರದ ಚಪ್ಪರ ಮುಹೂರ್ತವು ಡಿ.6ರಂದು ಬೆಳಿಗ್ಗೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಯಿತು.
ದೇವಳದ ಗಣಪತಿ ಗುಡಿಯ ಮುಂದೆ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭ ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.