ಡಿ.28,29: ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

0

ಕಾವುನಲ್ಲಿ ಪೂರ್ವಸಿದ್ಧತಾ ಸಭೆ-ಆಮಂತ್ರಣ ಪತ್ರ ಬಿಡುಗಡೆ

ಕಾವು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಾರಥ್ಯದಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ಮತ್ತು 29ರಂದು ನಡೆಯಲಿರುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಪೂರ್ವಸಿದ್ಧತಾ ಸಭೆ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದ.5ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲರವರು ಕಾರ್ಯಕ್ರಮದ ಬಗ್ಗೆ ಗ್ರಾಮದ ಪ್ರತೀ ಹಿಂದೂ ಮನೆಗೂ ಮಾಹಿತಿ ನೀಡಿ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಚಾರ ನೀಡಬೇಕು, ಆ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು.


ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಧಾರ್ಮಿಕ ನೇತಾರರೂ ಆಗಿರುವ ನನ್ಯ ಅಚ್ಚುತ ಮೂಡೆತ್ತಾಯರವರು ಮಾತನಾಡಿ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು, ಹಿಂದೂ ಸಮಾಜದ ಕಲ್ಯಾಣಕ್ಕಾಗಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಧಾರ್ಮಿಕ ಸಭೆಯು ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ, ಶ್ರೀನಿವಾಸ ಕಲ್ಯಾಣೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿಯವರು ಉಪಸ್ಥಿತರಿದ್ದರು. ಪುತ್ತಿಲ ಪರಿವಾರ ತಾಲೂಕು ಸಮಿತಿ ಸದಸ್ಯ ಸುನೀಲ್ ಬೋರ್ಕರ್ ಸ್ವಾಗತಿಸಿ, ಪುತ್ತಿಲ ಪರಿವಾರ ಕಾವು ಮಾಡ್ನೂರು ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಕುಂಜತ್ತಾಯ ವಂದಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಕೋಶಾಧಿಕಾರಿ ನಹುಷ ಭಟ್, ಬಿಜೆಪಿ ಎಸ್.ಸಿ ಮೋರ್ಛಾದ ಅಧ್ಯಕ್ಷ ಲೋಹೀತ್ ಅಮ್ಚಿನಡ್ಕ, ಬಿಜೆಪಿ ಮಾಡ್ನೂರು ಶಕ್ತಿಕೇಂದ್ರದ ಸಂಚಾಲಕ ನಾರಾಯಣ ಆಚಾರ್ಯ ಮಳಿ, ಪುತ್ತಿಲ ಪರಿವಾರ ಕಾವು ಮಾಡ್ನೂರು ಗ್ರಾಮ ಸಮಿತಿಯ ಕಾರ್ಯದರ್ಶಿ ಯೋಗೀಶ್ ಕಾವು, ಪುತ್ತಿಲ ಪರಿವಾರದ ಅನಂತಕೃಷ್ಣ ನಾಯಕ್ ಮುಂಡಕೊಚ್ಚಿ, ರವಿಪ್ರಸಾದ್ ರೈ ಕಾವು, ಚಿದಾನಂದ ಆಚಾರ್ಯ ಸಸ್ಪೆಟ್ಟಿ, ನಿರಂಜನ ರಾವ್ ಕಮಲಡ್ಕ, ಅಮೃತಲಿಂಗಂ ಕಾವು, ನಾರಾಯಣ ಶರ್ಮ ಬರೆಕರೆ, ರವಿಕಿರಣ್ ಪಾಟಾಳಿ ಕಾವು, ಸುಧೀಂದ್ರ ಕಾವು, ಅಶ್ವಥ್ ಕಾವು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here