ಕಾಣಿಯೂರು ಪ್ರಗತಿಯ ವಿಜ್ಞಾತ್ರಿ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ

0

ಕಾಣಿಯೂರು: ಹೋಲಿ ರಿಡಿಮರ್ ಶಾಲೆ ಬೆಳ್ತಂಗಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ವಿಜ್ಞಾತ್ರಿ ಬಿ (9ನೇ) ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಬೆದ್ರಂಗಳ ಗಣೇಶ್ ಭಟ್ ಮತ್ತು ಸವಿತಾ ಎಂ ದಂಪತಿಗಳ ಪುತ್ರಿ.
ಇವರಿಗೆ ಮುಖ್ಯಗುರು ನಾರಾಯಣ ಭಟ್ ಮಾರ್ಗದರ್ಶನ ನೀಡಿರುತ್ತಾರೆ.
ದೈಹಿಕ ಶಿಕ್ಷಣ ಶಿಕ್ಷಕಿ ವನಿತ ಕೆ ಎಸ್ ಸಹಕರಿಸಿದರು. ವಿಜೇತರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಮುಖ್ಯಗುರುಗಳು , ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here