ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಗೋಳಿತ್ತಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ಸವಿವನೆನಪಿಗಾಗಿ ಶಾಲಾ ಶತಮಾನೋತ್ಸವ ಸಮಿತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸುವ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮ ಡಿ.7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಂಸದ ಕ್ಯಾ| ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಬಾಬು ಪೂಜಾರಿ ಹಾಗೂ ಗ್ರಾ.ಪಂ.ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ ಡೆಬ್ಬೇಲಿ, ಎಸ್ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ, ಶಾಲಾ ಪೂರ್ವವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಹಾರೀಫ್ ಹೊಸಮನೆ, ಮುಖ್ಯಶಿಕ್ಷಕಿ ಜಯಂತಿ ಬಿ.ಎಂ. ಹಾಗೂ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.