ಪುತ್ತೂರು ತಾಲೂಕು ಅಹಿಂದದಿಂದ ಡಾ. ಬಿ ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ

0

ಪುತ್ತೂರು: ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾಪರಿ ನಿರ್ವಾಣ ದಿನ( 68ನೇ ಪುಣ್ಯತಿಥಿ) ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಅಹಿಂದ ವತಿಯಿಂದ ಡಿ.5ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಅಹಿಂದ ಅಧ್ಯಕ್ಷ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಮಾತನಾಡಿ, ಡಾ. ಬಿಆರ್ ಅಂಬೇಡ್ಕರ್ ರವರು ಈ ರಾಷ್ಟ್ರದ ದೀನ ದಲಿತರ ಶೋಷಿತ ವರ್ಗದ ಬೆಳಕಾಗಿದ್ದರು. ಸ್ವಾತಂತ್ರ್ಯ ನಂತರ ಅವರ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವು,ಪ್ರಪಂಚದ ಶೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಇವರು ಸಂವಿಧಾನ ಶಿಲ್ಪಿ ಮಾತ್ರವಲ್ಲದೆ, ನ್ಯಾಯಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ,ಸಮಾಜ ಸುಧಾರಕರಾಗಿ, ಮಹಿಳೆಯರು ದಲಿತರು ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ನ್ಯಾಯ ಸಿಗುವಂತೆ ಮಾಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ಅವರ ಆಚಾರ ವಿಚಾರಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಂಡು ನಡೆದಾಗ ಮಾತ್ರ ಅವರ ದಿನಾಚರಣೆಗಳನ್ನು ಆಚರಿಸುವುದರಲ್ಲಿ ಅರ್ಥ ಬಂದೀತು. ಈ ನಿಟ್ಟಿನಲ್ಲಿ ನಾವೆಲ್ಲರೂ ಸಾಗೋಣ ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ಬೌದ್ಧ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದೇವಪ್ಪ, ಕೋಶಾಧಿಕಾರಿ ಮನೋಹರ್ ಕಾರೆಕ್ಕಾಡ್, ಸಾಮಾಜಿಕ, ಧಾರ್ಮಿಕ ಮುಂದಾಳು, ಉದ್ಯಮಿ ಸಿನಾನ್ ಕಾಸಿಂ ಹಾಜಿ ಮಿತ್ತೂರ್, ಜೈ ಭೀಮ್ ಟ್ರಸ್ಟ್ ನಿಡ್ಪಳ್ಳಿ ಇದರ ಅಧ್ಯಕ್ಷ ಮಹೇಶ್ ಕೆ ಪಟ್ಟೆ ನುಡಿ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಸಾತ್ವಿಕ್ ಆರಿಗ ಬೆಳಂದೂರು,ಇಸ್ಮಾಯಿಲ್ ಎಂ ಬಿ ,ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here