ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ,ವರ್ಷಾವಧಿ ಜಾತ್ರೆಯು ಜ.1ರಿಂದ 14ರವರೆಗೆ ಆಡಳಿತಾಧಿಕಾರಿಗಳು ಮತ್ತು ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯಲಿದ್ದು, ಶ್ರೀ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ವಿವಿಧ ಜವಾಬ್ಧಾರಿಗಳನ್ನು ಹಂಚಲು ಮತ್ತು ಪೂರ್ವ ತಯಾರಿ ಬಗ್ಗೆ ಚರ್ಚಿಸಲು ಭಕ್ತರ ಸಭೆಯನ್ನು ಡಿ.6ರಂದು ಸಂಜೆ ಗಂ.6 ಕ್ಕೆ ಶ್ರೀ ಕ್ಷೇತ್ರದಲ್ಲಿ ಕರೆಯಲಾಗಿದ್ದು, ಈ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.