ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಡಬ ತಾಲೂಕು ಇದರ ವತಿಯಿಂದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಸವಣೂರು ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ತಿಂಗಳುಗಳ ಅವಧಿಯ ಟ್ಯೂಷನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಡಿ.6 ರಂದು ಸವಣೂರು ಜೂನಿಯರ್ ಕಾಲೇಜ್ ನಲ್ಲಿ ನಡೆಯಿತು
ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ,ವಕೀಲ ಮಹೇಶ್ ಕೆ ಸವಣೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲೆಯ ಮುಖ್ಯ ಶಿಕ್ಷಕ ರಘು ಬಿ ಆರ್ ಅಧ್ಯಕ್ಷತೆ ವಹಿಸಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಚೇತನಾ ಪ್ರಾಸ್ತಾವಿಕವಾಗಿ ಮಾತನಾಡಿ್ದರು. ವಲಯ ಮೇಲ್ವಿಚಾರಕಿ ವೀಣಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿ ಲೀಲಾ ಸ್ವಾಗತಿಸಿದರು. ಟ್ಯೂಷನ್ ನೀಡುವ ವಿಜ್ಞಾನ ಶಿಕ್ಷಕ ಕಿಶನ್ ಬಿ ವಿ, ಸೇವಾಪ್ರತಿನಿಧಿಗಳಾದ ಅಮಿತಾ , ಮೀನಾಕ್ಷಿ ಸವಣೂರು ಸಹಕರಿಸಿದರು. ಶಾಲಾ ಶಿಕ್ಷಕ ವೃಂದ, ಹತ್ತನೇ ತರಗತಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.