ನಿಡ್ಪಳ್ಳಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಹಾಗೂ ಪಾಣಾಜೆ ಗ್ರಾಮ ಸಮಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ.8ರಂದು ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ನಡೆಯಲಿದೆ.
ದಂತ ಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ನೇತ್ರ ತಪಾಸಣೆ, ಬಿ.ಪಿ ಮತ್ತು ಶುಗರ್ ತಪಾಸಣೆ, ರಕ್ತ ವರ್ಗೀಕರಣ, ಕಿವಿ, ಮೂಗು, ಗಂಟಲು ತಪಾಸಣೆ, ಎಲುಬು, ಚರ್ಮ ಮತ್ತು ಮಕ್ಕಳ ವಿಭಾಗದಲ್ಲಿ ತಪಾಸಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.