ಪುತ್ತೂರು: ರಾಷ್ಟ್ರೀಕೃತ ಬ್ಯಾಂಕ್ ಮತ್ತು ಖಾಸಗಿ ಬ್ಯಾಂಕ್‌ನಲ್ಲಿ ಖಾತೆ ಹೊಂದಿದವರಿಗೆ ವಿವಿಧ ಯೋಜನೆಗಳ ಮಾಹಿತಿ ಹಾಗೂ ವಿಮೆಗಳ ನೋಂದಣಿ ಕಾರ್ಯಕ್ರಮ ಜನಸುರಕ್ಷಾ ಕ್ಯಾಂಪ್ ದ.7ರಂದು ಒಳಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಗಳ ಮಾಹಿತಿ ಹಾಗೂ ವಿಮೆಗಳ ನೋಂದಣಿ ನಡೆಯಿತು.ಇದಲ್ಲದೆ ರೈತರ ಕಲ್ಯಾಣ ಯೋಜನೆಗಳ ಮಾಹಿತಿ ನೀಡಲಾಯಿತು. ಕುಂಬ್ರ ಬ್ಯಾಂಕ್ ಆಫ್ ಬರೋಡಾದ ಮ್ಯಾನೇಜರ್ ಲಕ್ಷ್ಮೀಬತಿರಾಜು ಹಾಗೂ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿ ಗೀತ ವಿಜಯ್‌ರವರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗ್ರಾಪಂ ಸದಸ್ಯ ಮಹೇಶ್ ಕೇರಿ ಉಪಸ್ಥಿತರಿದ್ದರು. ಗ್ರಾಪಂ ಅಭಿವೃದ್ದಿ ಅಧಿಕಾರಿ ಮನ್ಮಥ ಅಜಿರಂಗಳ ಸ್ವಾಗತಿಸಿ, ವಂದಿಸಿದರು. ಹಲವು ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿಗಳು ಸಹಕರಿಸಿದ್ದರು.