ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟತ್ತಾರು ಎಂಬಲ್ಲಿ ರಸ್ತೆ ಬದಿಯಲ್ಲಿ ಕಸ ಎಸೆದು ಹೋಗಿರುವ ಬಗ್ಗೆ ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರಿಗೆ ದ.7ರಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪಂಚಾಯತ್ ಅಧಿಕಾರಿಗಳು ತಪ್ಪಿತಸ್ಥರನ್ನು ಹುಡುಕಿ ರೂ.5 ಸಾವಿರ ದಂಡ ವಿಧಿಸಿದ್ದಾರೆ. ತಂಡದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಅಧ್ಯಕ್ಷ ಶರತ್ ಕುಮಾರ್ ಮಾಡಾವು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ವಚ್ಚ ಗ್ರಾಮದ ವಿಷಯದಲ್ಲಿ ಗ್ರಾಮ ಪಂಚಾಯತ್ ಹೆಚ್ಚಿನ ಮುತುವರ್ಜಿ ತೆಗೆದುಕೊಳ್ಳುತ್ತಿದ್ದು ಕಸ, ತ್ಯಾಜ್ಯ ಬಿಸಾಡುವವರ ವಿರುದ್ಧ ಈಗಾಗಲೇ ಕ್ರಮ ಜರುಗಿಸುವ ಮೂಲಕ ದಂಡನೆ ವಿಧಿಸಿ ಜಾಗೃತಿ ಮೂಡಿಸಿದೆ.