ಪುತ್ತೂರು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ ಅರಿಯಡ್ಕ ಗ್ರಾಮದ ಇದರ ಆಶ್ರಯದಲ್ಲಿ ನಡೆಯುವ 7ನೇ ವರ್ಷದ ಕೆಸರುಡೊಂಜಿ ದಿನ ದ.8ರಂದು ಮಜ್ಜಾರಡ್ಕದ ದಿ.ಜಯಂತಿ ಮಜ್ಜಾರ್ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯುವ ಪ್ರಶಸ್ತಿ ಪ್ರದಾನ, ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು, ವಾಲಿಬಾಲ್, ಪುರುಷರಿಗೆ ಮುಕ್ತ ಹಗ್ಗಜಗ್ಗಾಟ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ತುಳು ನಾಟಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ದ.8ರಂದು ಬೆಳಿಗ್ಗೆ ಕಾರ್ಯಕ್ರಮವನ್ನು ಮೀರಾ ಮೋಹನ್ ರೈ ಓಲೆಮುಂಡೋವು ಉದ್ಘಾಟಿಸಲಿದ್ದು, ಶಾಸಕರಾದ ಅಶೋಕ್ ಕುಮಾರ್ ರೈ, ಉಪನ್ಯಾಸಕ ರವೀಶ್ ಪಡುಮಲೆ ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಾಲಿಬಾಲ್, ಮುಕ್ತ ಹಗ್ಗಜಗ್ಗಾಟ ಸೇರಿದಂತೆ ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಶ್ರೀ ವಿಷ್ಣು ಯುವಶಕ್ತಿ ಬಳಗದ ಗೌರವ ಅಧ್ಯಕ್ಷ ಮೋಹನ್ ರೈ ಓಲೆಮುಂಡೋವು ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳುಗು ತಜ್ಞ ಈಶ್ವರ ಮಲ್ಪೆ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆ, ಸಮಾಜ ಸೇವಕ ಚಿಂತು ಸುಳ್ಯ, ಪುತ್ತೂರು ಹಿಂದೂ ರುದ್ರಭೂಮಿಯ ಸತೀಶ್ ಪಿ.ಬಿ ಮಡಿವಾಳ, ವಿಶೇಷ ವಿಕಲಚೇತನ, ಸಾಹಿತಿ ಮೋಹನ್ ದರ್ಬೆತ್ತಡ್ಕರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಮಾಡಿಕೊಡಬೇಕಾಗಿ ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ ಇದರ ಪ್ರಕಟಣೆ ತಿಳಿಸಿದೆ.
‘ಶಾಂಭವಿ’ ತುಳು ನಾಟಕ
ರಾತ್ರಿ 9 ರಿಂದ ಅಭಿನಯ ಕಲಾವಿದರು ಉಡುಪಿ ಅಭಿನಯಿಸುವ ಸಾಮಾಜಿಕ ನಾಟಕದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಅದ್ದೂರಿ ರಂಗ ವಿನ್ಯಾಸದ ‘ಶಾಂಭವಿ’ ಎನ್ನುವ ತುಳು ನಾಟಕ ಪ್ರದರ್ಶನಗೊಳ್ಳಲಿದೆ.ಕಲಾಭಿಮಾನಿಗಳಿಗೆ ಮುಕ್ತ ಪ್ರವೇಶವಿದೆ.