ಪುತ್ತೂರು: ಪುತ್ತೂರಿನ ನೃತ್ಯೋಪಾಸಣಾ ಕಲಾ ಅಕಾಡೆಮಿ ವತಿಯಿಂದ ಷಷ್ಠಿ ಮಹೋತ್ಸವ ಪ್ರಯುಕ್ತ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.6ರಂದು ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು. ಕಲಾ ಕೇಂದ್ರದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ನೃತ್ಯ ವೈವಿಧ್ಯ ನಡೆಸಿಕೊಟ್ಟರು. ದೇವಸ್ಥಾನದ ಆಡಳಿತಾಧಿಕಾರಿ ಸುಲೋಚನ ಅವರು ಕಲಾವಿದರನ್ನು ಗೌರವಿಸಿದರು.