ಪುತ್ತೂರು: ಶ್ರೀ ಗಜಾನನ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಪ್ರಯುಕ್ತ ಪೋಷಕರ ಕ್ರೀಡಾಕೂಟ ನಡೆಯಿತು.
ಕಾರ್ಯಕ್ರಮವನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ನನ್ಯ ಅಚ್ಚುತ್ತ ಮೂಡೆತ್ತಾಯರವರು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಶಾಲಾ ಪ್ರಾಂಶುಪಾಲರಾದ ಕೆ ಶಾಮಣ್ಣರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾಡಳಿತ ಮಂಡಳಿಯ ಸಂಚಾಲಕರಾದ ಶಿವರಾಮ್ ಪಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಶಾಲಾಡಳಿತ ಮಂಡಳಿಯ ಸದಸ್ಯರಾದ ಜೈರಾಜ್ ರೈ ಕ್ರೀಡಾಕೂಟದ ನಿಯಮಗಳನ್ನು ತಿಳಿಸಿದರು. ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ, ಗಜಾನನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ನರೇಂದ್ರ ಭಟ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿಯರಾದ ಸೌಮ್ಯ ಎ, ಲತಾ ಡಿ ಕೆ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಸೌಮ್ಯ ಎ ಸ್ವಾಗತಿಸಿದರು.ಶಿಕ್ಷಕಿಯರಾದ ಗುಣಶ್ರೀ ಹಾಗೂ ಜಯಸ್ವಿನಿ ಪ್ರಾರ್ಥಿಸಿದರು.ಶಿಕ್ಷಕಿ ಪ್ರೇಮ ವಂದಿಸಿದರು. ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.